ನವದೆಹಲಿ: ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಜನರ ದಿಕ್ಕು ತಪ್ಪಿಸುತ್ತಿದೆ. ಮಹಿಳೆಯರ ರಕ್ಷಣೆಗಿಂತ ತನ್ನ ಮತ ಬ್ಯಾಂಕ್ ರಕ್ಷಣೆಗೆ ಆದ್ಯತೆ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.

ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ, ‘ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಿಸಿದ ರೀತಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂದೇಶ್ ಖಾಲಿ ಪ್ರಕರಣವನ್ನು ನಿರ್ವಹಿಸಿದ ರೀತಿ ಒಂದೇ ತೆರನಾದುದು’ ಎಂದರು.

ತಮ್ಮ ಮಗಳ ಕೊಲೆ ಪ್ರಕರಣವನ್ನು ಲವ್ ಜಿಹಾದ್ ಎಂದು ಕಾಂಗ್ರೆಸ್ನ ಪುರಸಭಾ ಸದಸ್ಯ ನಿರಂಜನ ಹಿರೇಮಠ ಅವರೇ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಪ್ರೇಮ ಪ್ರಕರಣವೆಂದು ವ್ಯಾಖ್ಯಾನಿಸಿ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.