ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ | ಸೆ.15ಕ್ಕೆ ಬೃಹತ್ ಮಾನವ ಸರಪಳಿ: ಮಹದೇವಪ್ಪ

Published : 26 ಆಗಸ್ಟ್ 2024, 14:35 IST
Last Updated : 26 ಆಗಸ್ಟ್ 2024, 14:35 IST
ಫಾಲೋ ಮಾಡಿ
Comments

ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಸೆ. 15ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

‘ಬೆಳಿಗ್ಗೆ 8.30ಕ್ಕೆ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿ ವಹಿಸಲಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದರು.

‘ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಉದ್ದೇಶ ಹೊಂದಲಾಗಿದೆ’ ಎಂದರು.

‘ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿ ಶಕ್ತವಾಗಬೇಕಿದೆ. ಈ ಕಾರಣಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವು ಮೂಡಿಸಬೇಕಿದೆ. ಈ ಹಿನ್ನಲೆಯಲ್ಲಿ, ಮಾನವ ಸರಪಳಿ ರಚಿಸುವ ಮೂಲಕ‌ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT