ಹುಣಸಗಿ: ‘ಸಮಾನತೆ ತತ್ವಗಳ ಜೊತೆಗೆ ದೇಶದ ಪ್ರತಿಯೊಬ್ಬರ ಹಿತ ಕಾಪಾಡುವಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರು ಎರಡು ಕಣ್ಣುಗಳಿದ್ದಂತೆ’ ಎಂದು ಉಪನ್ಯಾಸಕ ರಮೇಶ ಮಾಳಗಿ ಹೇಳಿದರು.

ಹುಣಸಗಿ ಪಟ್ಟಣದಲ್ಲಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಭಾರತದ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 119ನೇ ಜಯಂತ್ಯುತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

‘ಡಾ.ಬಾಬು ಜಗಜೀವನರಾಂ ಅವರು ಬಡಕುಟುಂಬದಲ್ಲಿ ಜನಿಸಿ ಅನೇಕ ಸಮಸ್ಯೆಗಳನ್ನು ಮೆಟ್ಟಿನಿಂತು, ಭಾರತದ ರಾಜಕೀಯ ಕ್ಷೇತ್ರದಲ್ಲಿ ವಿಶೇಷವಾದ ಸೇವೆಯನ್ನು ಸಲ್ಲಿಸಿದ್ದಾರೆ. ಬಾಬೂಜಿ ಅವರು ಕಾರ್ಮಿಕ ಕ್ಷೇತ್ರದಲ್ಲಿ ಹಾಗೂ ಯುದ್ಧದ ವೇಳೆ ರಕ್ಷಣಾ ಕ್ಷೇತ್ರದಲ್ಲಿ ಕೈಗೊಂಡಿರುವ ಕ್ರಮಗಳು ಇಂದಿಗೂ ಮರೆಯುವಂತಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಂವಿಧಾನಿಕ ಆಶಯಗಳು ಇವರು ಪೂರ್ಣಗೊಳಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಣಸಗಿ ತಹಶೀಲ್ದಾರ್ ಎಂ.ಬಸವರಾಜ ಮಾತನಾಡಿ, ‘ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಜಗಜೀವನರಾಂ ಅವರು ವಿಶೇಷ ಕೊಡುಗೆ ನೀಡಿದ್ದಾರೆ’ ಎಂದರು.

ಪ್ರಾಸ್ತಾವಿಕವಾಗಿ ಗುರು ಹುಲಕಲ್ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಸವರಾಜ ಕಟ್ಟಿಮನಿ, ಕಲಾವಿದ ನಾಗರಾಜ ಕೊಡೇಕಲ್ಲ, ಯುವ ಕವಿ ಮಲ್ಲು ಹುಲಿಮನಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗನ್ನು ಸನ್ಮಾನಿಸಿ ಗೌರವಿಸಲಾಯಿತು.

ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಮಹಮ್ಮದ ರಫೀಕ್ ಪಟೇಲ್, ಮಹಿಬೂಬಸಾಬ್ ಖಾಜಿ, ಸಿದ್ಧಾರ್ಥ ಪಾಟೀಲ, ಮಹ್ಮದ್ ಸಲೀಂ, ಯಂಕಣ್ಣ ಟಣಕೇದಾರ, ಲಾಲಸಾಬ್ ಪಿರಾಪುರ, ಕ್ರೈಂ ಪಿಎಸ್ಐ ಭಾಗಣ್ಣ ವೇದಿಕೆಯಲ್ಲಿದ್ದರು. ದೇವಿಂದ್ರಪ್ಪ ಬಳಿಚಕ್ರ ಸ್ವಾಗತಿಸಿದರು. ಬಸವರಾಜ ಕಾಮನಟಗಿ ನಿರೂಪಿಸಿದರು. ಮಲ್ಲು ಮ್ಯಾಗೇರಿ ವಂದಿಸಿದರು.

ಪಟ್ಟಣದ ಮಹಾಂತಸ್ವಾಮಿ ವೃತ್ತದಲ್ಲಿ ಅಲಂಕೃತ ವಾಹನದಲ್ಲಿ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ ನೀಡಿದರು.

ಕೆಪಿಸಿಸಿ ಸದಸ್ಯ ಸಿದ್ದಣ್ಣ ಸಾಹುಕಾರ ಮಲಗಲದಿನ್ನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಎಂ.ರೇವಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಸಜ್ಜನ್, ಪ.ಪಂ ಸದಸ್ಯರಾದ ಶರಣು ಸಾಹುಕಾರ ದಂಡಿನ, ಸಿದ್ರಾಮಪ್ಪ ಮುದಗಲ್ಲ, ಮಲ್ಲು ಹೆಬ್ಬಾಳ ಹಾಗೂ ಬಸಣ್ಣ ಬಾಲಗೌಡ್ರ, ಮುಖಂಡರಾದ ಸಿದ್ದನಗೌಡ ಕರಿಭಾವಿ, ರವಿ ಮಲಗಲದಿನ್ನಿ ಸೇರಿದಂತೆ ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-30-1637836581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.