ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.… pic.twitter.com/Fe4uHvrw2y
— Siddaramaiah (@siddaramaiah) November 4, 2025
ಬಾಗಲಕೋಟೆ ಕಾಂಗ್ರೆಸ್ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ವೈ ಮೇಟಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ನೋವಾಗಿದೆ. ಅವರ ಅಗಲಿಕೆಯಿಂದ ಪಕ್ಷಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ… pic.twitter.com/1X1Pt8o7Jh
— DK Shivakumar (@DKShivakumar) November 4, 2025
ಮಾಜಿ ಸಚಿವರೂ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಕೋರುವೆ. ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದ ಅವರ ಅಗಲಿಕೆಯಿಂದ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಉಂಟಾಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.… pic.twitter.com/omCRdyTITb
— Vijayendra Yediyurappa (@BYVijayendra) November 4, 2025
ಮಾಜಿ ಸಚಿವರು, ಬಾಗಲಕೋಟೆ ಕ್ಷೇತ್ರದ ಶಾಸಕರಾದ ಶ್ರೀ ಹೆಚ್.ವೈ.ಮೇಟಿ ಅವರ ನಿಧನಕ್ಕೆ ನನ್ನ ಸಂತಾಪಗಳು.
— R. Ashoka (@RAshokaBJP) November 4, 2025
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ, ಬಂಧು ವರ್ಗ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/53qiRVLzCc
ಮಾಜಿ ಸಚಿವರು ಹಾಗು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಎಚ್.ವೈ.ಮೇಟಿ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
— H D Devegowda (@H_D_Devegowda) November 4, 2025
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/B3a3F3tvUo
ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಶ್ರೀಯುತ ಎಚ್.ವೈ.ಮೇಟಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.
— Nikhil Kumar (@Nikhil_Kumar_k) November 4, 2025
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#ಸದ್ಗತಿ pic.twitter.com/vkUN3VMPz0
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.