ಹಾಸನ: ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಡಿ.ಎಸ್.ಲೋಕೇಶ್ ಅವರು, ತಮ್ಮ ಮೇಜಿನ ಮೇಲೆ ಇಟ್ಟಿರುವ ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎಂಬ ಫಲಕದ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ.
ಫಲಕದ ಮುಂದೆ ಕುಳಿತ ಅವರ ಫೋಟೋ ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಬಹುತೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಪ್ರಾಮಾಣಿಕವಾಗಿ ನನ್ನ ಕೆಲಸ ಮಾಡುತ್ತಿದ್ದೇನಷ್ಟೇ’ ಎಂದು ಹೇಳಿದರು.
ಈ ಹಿಂದೆ ಎಚ್.ಡಿ. ದೇವೇಗೌಡರು ಹಾಗೂ ಮಾಜಿ ಶಾಸಕ ಪ್ರೀತಂ ಗೌಡರಿಗೆ ಆಪ್ತ ಸಹಾಯಕರಾಗಿಯೂ ಅವರು ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಬಿಇಒ ಕಚೇರಿ ಅಧೀಕ್ಷಕರಾಗಿ ಬಡ್ತಿ ಹೊಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.