ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು: ಬಿಜೆಪಿಗೆ ಮರಳಿದ ಶೆಟ್ಟರ್ ಹೇಳಿಕೆ

Published 25 ಜನವರಿ 2024, 9:57 IST
Last Updated 25 ಜನವರಿ 2024, 9:57 IST
ಅಕ್ಷರ ಗಾತ್ರ

ನವದೆಹಲಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿದ್ದೇನೆ ಎಂದು ವಿಧಾನ ‍ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದರು.

ಇಲ್ಲಿನ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪಕ್ಷಕ್ಕೆ ಮರಳಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ‘ಈ ಹಿಂದೆ ಪಕ್ಷ (ಬಿಜೆ‍ಪಿ) ನನಗೆ ಹಲವು ಜಬಾಬ್ದಾರಿಗಳನ್ನು ವಹಿಸಿತ್ತು. ಆದರೆ ಕೆಲವು ಕಾರಣಗಳಿಂದಾಗಿ, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ’ ಎಂದು ಅವರು ಹೇಳಿದರು.

‘ಕಳೆದ 8–9 ತಿಂಗಳಿನಿಂದ ಹಲವು ಚರ್ಚೆಗಳು ನಡೆದವು. ಪಕ್ಷಕ್ಕೆ ಮರಳಿ ಬರುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದರು. ನಾನು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಬೇಕು ಎಂದು ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ಬಯಸಿದ್ದರು’ ಎಂದು ಅವರು ನುಡಿದರು.

‘ಪ್ರಧಾನಿಯಾಗಿ ದೇಶದ ಶಕ್ತಿಯನ್ನು ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ಪಕ್ಷಕ್ಕೆ ಮರು ಸೇರ್ಪಡೆಯಾಗುತ್ತಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT