ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣೆಕಟ್ಟು ಕಟ್ಟಲೆಂದೇ ಜಲಸಂಪನ್ಮೂಲ ಇಲಾಖೆ ವಹಿಸಿಕೊಂಡಿದ್ದೇನೆ: ಡಿ.ಕೆ. ಶಿವಕುಮಾರ್

Published 21 ಮಾರ್ಚ್ 2024, 15:00 IST
Last Updated 21 ಮಾರ್ಚ್ 2024, 15:00 IST
ಅಕ್ಷರ ಗಾತ್ರ

ಬೆಂಗಳೂರು: ‘ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿರುವ ಬಗ್ಗೆ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇಬೇಕು’ ಎಂದರು.

‘ಮೇಕೆದಾಟು ವಿಚಾರದಲ್ಲಿ ಕೋರ್ಟ್​ನಲ್ಲೂ ನಮಗೆ ನ್ಯಾಯ ಸಿಗುತ್ತದೆ.‌ ಡಿಎಂಕೆ ಪ್ರಣಾಳಿಕೆ ‘ಇಂಡಿಯಾ’ ಮೈತ್ರಿಕೂಟದ ಪ್ರಣಾಳಿಕೆಯಲ್ಲ. ಅದು ಅವರ ಪಕ್ಷದ ಪ್ರಣಾಳಿಕೆ. ಅದು ಅವರ ರಾಜಕೀಯ ಬಯಕೆ ಅಷ್ಟೇ’ ಎಂದರು.

‘ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT