ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ: ನಟ ಪ್ರಕಾಶ್‌ ರಾಜ್‌

Published 6 ಸೆಪ್ಟೆಂಬರ್ 2023, 5:33 IST
Last Updated 6 ಸೆಪ್ಟೆಂಬರ್ 2023, 5:33 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ. ನನ್ನ ಅಪ್ಪ–ಅಮ್ಮನಿಗೆ ಹುಟ್ಟಿದ್ದೇನೆ. ನಾನು ಧರ್ಮದ ವಿರುದ್ಧ ಅಲ್ಲ. ಆದರೆ ಸಂಸತ್‌ನಲ್ಲಿ ಹೋಮ–ಹವನ ಮಾಡಬಾರದು. ಇಂದು ಗೌರಿಯ ದಿನ. ನಮ್ಮ ಧ್ವನಿ ಹತ್ತಿಕ್ಕಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ನಟ ಪ್ರಕಾಶ್‌ ರಾಜ್‌ ಹೇಳಿದರು.

ಗೌರಿ ಸ್ಮಾರಕ ಟ್ರಸ್ಟ್ ಮಂಗಳವಾರ ಆಯೋಜಿಸಿದ್ದ ‘ಗೌರಿ ನೆನಪು’–  ‘ಸರ್ವಾಧಿಕಾರಿ ಕಾಲದ ಹೊತ್ತಲ್ಲಿ ದೇಶವನ್ನು ಮರು ಕಟ್ಟುವ ಕಲ್ಪನೆ’ ಎಂಬ ವಿಷಯ ಕುರಿತ ಸಂವಾದದಲ್ಲಿ ಪ್ರಕಾಶ್‌ ರಾಜ್‌ ಮಾತನಾಡಿದರು.

‘ಗೌರಿಯ ಕುಟುಂಬ ಬೆಳೆಯುತ್ತಿದೆ. ನಾವು ನಿರಂತರವಾಗಿ ಹೋರಾಟ ಮುಂದುವರಿಸೋಣ. ಗೌರಿಯ ಆಶಯಗಳನ್ನು ಮುಂದಿನ ಪೀಳಿಗೆಯತ್ತ ಕೊಂಡೊಯ್ಯಬೇಕು’ ಎಂದು ಗೌರಿ ಸೋದರಿ ಕವಿತಾ ಲಂಕೇಶ್‌ ಹೇಳಿದರು.

ಇದನ್ನೂ ಓದಿ: ವೈಚಾರಿಕವಾಗಿ ಎದುರಿಸಲಾಗದವರಿಂದ ಗೌರಿ ಲಂಕೇಶ್ ಹತ್ಯೆಯಾಗಿದೆ: ಸಿಎಂ ಸಿದ್ದರಾಮಯ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT