ಬೆಂಗಳೂರು: ‘ವರಿಷ್ಠರಿಂದ ಆಹ್ವಾನ ಬಂದರೆ ದೆಹಲಿಗೆ ಹೋಗುತ್ತೇನೆ. ಸದ್ಯ ಅಲ್ಲಿ ನನಗೆ ಯಾವುದೇ ಕಾರ್ಯಕ್ರಮ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡಬೇಕಿದೆ. ಅವರು ಸಮಯ ನೀಡಿದ ನಂತರ ದೆಹಲಿ ಪ್ರವಾಸ ಮಾಡುತ್ತೇನೆ’ ಎಂದರು.

ಸರ್ಕಾರಕ್ಕೆ 2 ವರ್ಷ ಪೂರೈಸಿದ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, ‘ಈ ವಿಚಾರದ ಬಗ್ಗೆ ಹೈಕಮಾಂಡ್ ಮತ್ತು ಮುಖ್ಯಮಂತ್ರಿಯವರನ್ನು ಕೇಳಬೇಕು’ ಎಂದರು.

ನಿಗಮ–ಮಂಡಳಿಗಳಿಗೆ ನೇಮಕ ಬಗ್ಗೆ ಕೇಳಿದಾಗ, ‘ಪಟ್ಟಿ ಸಿದ್ಧವಾಗಿದೆ. ಸ್ಥಳೀಯ ನಾಯಕರ ಜತೆ ಚರ್ಚಿಸಿ ಶೀಘ್ರದಲ್ಲೇ ಪ್ರಕಟಿಸಲಾಗುವುದು’ ಎಂದರು.

‘ಗ್ಯಾರಂಟಿ ಸಮಿತಿಯಲ್ಲಿ ನಾಲ್ಕು ಸಾವಿರ ಕಾರ್ಯಕರ್ತರಿಗೆ ಈಗಾಗಲೇ ಅಧಿಕಾರ ನೀಡಿದ್ದೇವೆ. ಎಂಟು ಸಾವಿರ ಕಾರ್ಯಕರ್ತರನ್ನು ವಿವಿಧ ಸಮಿತಿಗಳಿಗೆ ಸದಸ್ಯರನ್ನಾಗಿ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ 500ರಿಂದ 600 ಮಂದಿಗೆ ಅವಕಾಶ ನೀಡಬೇಕಿದೆ’ ಎಂದರು.

ಪರಿಷತ್ತಿನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಕೇಳಿದಾಗ, ‘ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.

‘ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಬರೆದಿರುವ ಪತ್ರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ನಂತರ, ಈ ಬಗ್ಗೆ ಚರ್ಚಿಸಲು ಪ್ರಧಾನಿ ಮತ್ತು ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.