ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧುಸ್ವಾಮಿಗೆ ವಾರ್ನ್ ಮಾಡುತ್ತೇನೆ: ಮುಖ್ಯಮಂತ್ರಿ 

Last Updated 21 ಮೇ 2020, 8:33 IST
ಅಕ್ಷರ ಗಾತ್ರ

ಬೆಂಗಳೂರು: 'ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ವಾರ್ನ್ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೋವಿಂದರಾಜನಗರ ವಾರ್ಡ್ನಲ್ಲಿ ರೆಫರಲ್ ಆಸ್ಪತ್ರೆ ಹಾಗೂ ಅಗ್ರಹಾರ ದಾಸರಹಳ್ಳಿ ವಾರ್ಡ್ನಲ್ಲಿ 200 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

'ಮಹಿಳೆಯರ ಬಗ್ಗೆ ಯಾರೂ ಕೇವಲವಾಗಿ ಮಾತನಾಡಬಾರದು. ಒಬ್ಬ ಸಚಿವರಾಗಿ ಮಾಧುಸ್ವಾಮಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರನ್ನು‌ ಕರೆದು ಎಚ್ಚರಿಕೆ ನೀಡುತ್ತೇನೆ. ನೊಂದಿರುವ ಮಹಿಳೆಯನ್ನೂ ಕರೆದು ಮಾತನಾಡುತ್ತೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT