ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌.ಕೆ ಅತೀಕ್ ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ

ಜೂನ್ 30ರಿಂದ ಅಧಿಕಾರ ಸ್ವೀಕಾರ, ಅಲ್ಲಿವರೆಗೂ ಹಣಕಾಸು ಇಲಾಖೆಗೆ ವಿಶೇಷ ಕರ್ತವ್ಯಾಧಿಕಾರಿ
Published 31 ಮೇ 2023, 9:02 IST
Last Updated 31 ಮೇ 2023, 9:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಎಲ್‌.ಕೆ ಅತೀಕ್ ಅವರನ್ನು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರು ಜೂನ್ 30 ರಿಂದ ಅಧಿಕಾರ ವಹಿಸಿಕೊಳ್ಳುತ್ತಾರೆ.

ಪ್ರಸ್ತುತ ಆ ಹುದ್ದೆಯಲ್ಲಿರುವ ಪ್ರಸಾದ್ ಐ.ಎಸ್.ಎನ್ ಅವರು ಜೂನ್ 30 ರಂದು ನಿವೃತ್ತರಾಗಲಿದ್ದಾರೆ.

ಎಲ್‌.ಕೆ ಅತೀಕ್ ಅವರನ್ನು ಜೂನ್ 30ರವರಗೆ ಅಂದರೆ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವವರೆಗೂ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಯ ಜೊತೆಗೆ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT