ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್‌ ಸಿಂಗ್‌ ನೇಮಕ

Published 8 ಜೂನ್ 2023, 6:34 IST
Last Updated 8 ಜೂನ್ 2023, 6:34 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹತ್ತು ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ಈ ಕುರಿತು ಅಧಿಸೂಚನೆ ಪ್ರಕಟಿಸಿರುವ ರಾಜ್ಯ ಸರ್ಕಾರ, ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, ಕರ್ನಾಟಕ ನಗರಾಭಿವೃದ್ದಿ ಕಾಯ್ದೆಯಡಿ ನೇಮಕ ಮಾಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿ ಬರುವ ಯೋಜನಾ ಪ್ರಾಧಿಕಾರಗಳಾದ ಆನೇಕಲ್ ಯೋಜನಾ ಪ್ರಾಧಿಕಾರ, ಹೊಸಕೋಟೆ ಯೋಜನಾ ಪ್ರಾಧಿಕಾರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ, ಮಾಗಡಿ ಯೋಜನಾ ಪ್ರಾಧಿಕಾರ, ಚನ್ನಪಟ್ಟಣ ಯೋಜನಾ ಪ್ರಾಧಿಕಾರ, ಕನಕಪುರ ಯೋಜನಾ ಪ್ರಾಧಿಕಾರ, ನೆಲಮಂಗಲ ಯೋಜನಾ ಪ್ರಾಧಿಕಾರ, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ, ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರಕ್ಕೆ ರಾಕೇಶ್‌ ಸಿಂಗ್‌ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT