ವಾಲ್ಮೀಕಿ ಹಗರಣ ವಿಷಯಾಂತರಕ್ಕೆ ಯತ್ನ: ಜೋಶಿ
‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಹೈಕೋರ್ಟ್ ಸಿಬಿಐಗೆ ಒಪ್ಪಿಸಿದ ವಿಚಾರವನ್ನು ಮರೆ ಮಾಚಲು ಕಾಂಗ್ರೆಸ್ ಸರ್ಕಾರ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ವಿಚಾರವನ್ನು ಮುನ್ನೆಲೆಗೆ ತಂದಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ದೂರಿದರು. ‘ರಾಜ್ಯದ ಮುಖ್ಯ ಕಾರ್ಯದರ್ಶಿ ವಿಚಾರದಲ್ಲಿ ರವಿಕುಮಾರ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಸರ್ಕಾರ ಎಫ್‌ಐಆರ್ ದಾಖಲಿಸಿದೆ. ತನಿಖೆ ನಡೆಸಲಿ. ಆದರೆ ಕಾಂಗ್ರೆಸ್ ಸರ್ಕಾರ ತಮ್ಮ ಹುಳುಕು ಮುಚ್ಚಿಕೊಳ್ಳಲು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ’ ಎಂದರು.