ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣರೆಡ್ಡಿ ಅವರನ್ನು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಕುಮಾರಸ್ವಾಮಿ ಅವರ ಕಾರ್ಯದರ್ಶಿಯಾಗಿದ್ದ ಎಸ್. ಸೆಲ್ವಕುಮಾರ್ ಅವರನ್ನು ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಎಂ.ಕೆ. ಶ್ರೀರಂಗಯ್ಯ ಅವರನ್ನು ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಎ.ಆರ್. ರವಿ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಉಪ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿ ತವರು ಜಿಲ್ಲೆಯಾದ ಶಿವಮೊಗ್ಗ ನಗರಪಾಲಿಕೆ ಆಯುಕ್ತರಾಗಿದ್ದ ರವಿ, ಅಲ್ಲಿ ಭ್ರಷ್ಟಾಚಾರ ತೊಡೆದು ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಪ್ರತಿನಿಧಿಗಳ ಸಿಟ್ಟಿಗೆ ಗುರಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಕೆಲಸ ಮಾಡಿದ ಅವಧಿಯಲ್ಲಿ ಶಿವಮೊಗ್ಗದ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು.

ವಾರ್ತಾ ಇಲಾಖೆಯ ನಿರ್ದೇಶಕರಾಗಿದ್ದ ಎನ್. ಭೃಂಗೀಶ್ ಅವರನ್ನು ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಭೃಂಗೀಶ್ ಅವರು ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.