ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

Last Updated 27 ಮೇ 2022, 19:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರು ಇದೇ 31 ರಂದು ನಿವೃತ್ತಿ ಹೊಂದಲಿದ್ದಾರೆ.ವಂದಿತಾ ಅವರ ಅವಧಿ ನವೆಂಬರ್‌ 2023ರವರೆಗೆ ಇರಲಿದೆ.

ವಂದಿತಾ ಶರ್ಮ ಅವರು ಪಂಜಾಬ್‌ನವರು. ಈ ಹಿಂದೆ ತೆರೇಸಾ ಭಟ್ಟಾಚಾರ್ಯ, ಮಾಲತಿದಾಸ್‌ ಮತ್ತು ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಕೋವಿಡ್‌ ಸಂದರ್ಭದಲ್ಲಿ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ನೋಡಲ್‌ ಅಧಿಕಾರಿಯಾಗಿವಂದಿತಾ ಕಾರ್ಯನಿರ್ವಹಿಸಿದ್ದರು. ಕೇಂದ್ರ ಸರ್ಕಾರದಲ್ಲಿ ಬಾಹ್ಯಾಕಾಶ ಇಲಾಖೆಯಲ್ಲೂ ಕಾರ್ಯ ನಿರ್ವಹಿಸಿದ್ದರು.

ವಂದಿತಾ ಶರ್ಮ ರಾಜ್ಯ ಐಎಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷೆಯಾಗಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಸಿಗೆ ಬ್ಲಾಕಿಂಗ್‌ ಪ್ರಕರಣದಲ್ಲಿ ಶಾಸಕ ಸತೀಶ ರೆಡ್ಡಿಯವರ ಬೆಂಬಲಿಗರು ಐಎಎಸ್‌ ಅಧಿಕಾರಿ ಯಶವಂತ್‌ ಅವರ ಮೇಲೆ ಹಲ್ಲೆಯ ಯತ್ನ ನಡೆಸಿದ್ದರು. ಆ ಹೊತ್ತಿನಲ್ಲಿ ವಂದಿತಾ ಅವರು ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT