ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ₹8,000 ಕೋಟಿ ಬಂಡವಾಳ ಹೂಡಲು ಐಬಿಸಿ ಆಸಕ್ತಿ

Published 19 ಜೂನ್ 2023, 23:35 IST
Last Updated 19 ಜೂನ್ 2023, 23:35 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್‌ ಚಾಲಿತ ವಾಹನಗಳಿಗೆ ಅಗತ್ಯವಾದ ಲಿಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್‌ ನ್ಯಾಷನಲ್ ಬ್ಯಾಟರಿ ಕಂಪನಿ (ಐಬಿಸಿ) ರಾಜ್ಯದಲ್ಲಿ ₹8,000 ಕೋಟಿ ಬಂಡವಾಳ ಹೂಡಲು ಆಸಕ್ತಿ ತೋರಿದೆ.

ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಕಂಪನಿಯ ಪ್ರತಿನಿಧಿಗಳೊಂದಿಗೆ ಸೋಮವಾರ ಪ್ರಾಥಮಿಕ ಹಂತದ ಮಾತುಕತೆ ನಡೆಸಿದರು.

'ವಿದ್ಯುತ್‌ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ, ನಮ್ಮಲ್ಲಿ ಲಿಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ.ಈಗ ಐಬಿಸಿ ಕಂಪನಿ ಮುಂದೆ ಬಂದಿದ್ದು, ಇದೊಂದು ಉತ್ತಮ ಬೆಳವಣಿಗೆ' ಎಂದು ಪಾಟೀಲ ಹೇಳಿದರು.

'ಈ ಕಂಪನಿಯು ದೇವನಹಳ್ಳಿ ಬಳಿ ಇರುವ ಐಟಿಐಆರ್‌ ಪಾರ್ಕ್‌ನಲ್ಲಿ 100 ಎಕರೆ ಜಮೀನು ಕೇಳಿದೆ. ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು' ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT