ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಚಿಹ್ನೆ ಬಳಕೆಗೆ ಇಬ್ರಾಹಿಂಗೆ ನಿರ್ಬಂಧ

Published 20 ಜನವರಿ 2024, 21:42 IST
Last Updated 20 ಜನವರಿ 2024, 21:42 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ. ಜೆಡಿಎಸ್ ಹೆಸರಲ್ಲಿ ಸುದ್ದಿಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನು ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಇಬ್ರಾಹಿಂ ಅವರು ಜೆಡಿಎಸ್​ನಿಂದ ಉಚ್ಛಾಟನೆಯಾದರೂ ಪಕ್ಷದ ಚಿಹ್ನೆ, ಹೆಸರು ಬಳಸುತ್ತಿದ್ದಾರೆ. ಅದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 

ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾಗ ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ, ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಲಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅಮಾನತು ಮಾಡಿದ್ದರು. ನಂತರ ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ನಾಯಕರ ಸಭೆ ಉಚ್ಛಾಟನೆಯ ನಿರ್ಧಾರ ಕೈಗೊಂಡಿತ್ತು.

ಆದರೆ, ಇಬ್ರಾಹಿಂ ಅವರು ‘ನಮ್ಮದೇ ನಿಜವಾದ ಜೆಡಿಎಸ್‌. ಉಚ್ಛಾಟನೆ ನಿಯಮ ಬಾಹಿರ. ಈಗಲೂ ನಾನೆ ರಾಜ್ಯ ಘಟಕದ ಅಧ್ಯಕ್ಷ’ ಎಂದು ಹೇಳಿಕೆ ನೀಡಿದ್ದರು. ಅಧಿಕೃತವಾಗಿಯೇ ಪಕ್ಷದ ಲೆಟರ್‌ಹೆಡ್‌, ಚಿಹ್ನೆ ಬಳಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT