ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ 2024ಕ್ಕೆ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ: ಪೇಜಾವರ ಸ್ವಾಮೀಜಿ

Last Updated 20 ಮೇ 2022, 11:36 IST
ಅಕ್ಷರ ಗಾತ್ರ

ಮಂಗಳೂರು: ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 2024ರ ಜನವರಿಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನಡೆಯಲಿದೆ’ ಎಂದು ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿಯ ಟ್ರಸ್ಟಿಗಳಾಗಿರುವ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

‘ಕರ್ನಾಟಕದಿಂದ ಕಳುಹಿಸಿರುವ ಶಿಲೆಗಳಿಂದ ಅಡಿಪಾಯ ನಿರ್ಮಾಣ ಮಾಡಲಾಗುತ್ತಿದೆ. ಜೂನ್ 1ಕ್ಕೆ ಗರ್ಭಗುಡಿಯ ಶಿಲಾನ್ಯಾಸ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲಿದ್ದೇನೆ’ ಎಂದರು.

‘ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ವಿಚಾರ ಸಂತಸ ತಂದಿದೆ. ಇಲ್ಲಿತನಕ ಇದ್ದ ನಂಬುಗೆ, ಪುರಾಣದಲ್ಲಿ ಇದ್ದ ಮಾಹಿತಿ ಸತ್ಯವಾಗಿದೆ. ಇಂಥದ್ದು ಎಲ್ಲಿಯೇ ಇದ್ದರೂ ಬೆಳಕಿಗೆ ಬರಬೇಕಿದೆ. ಭಾರತೀಯ ಸನಾತನ ಸಂಸ್ಕೃತಿಗೆ ವಿಜಯ ದೊರಕಬೇಕಿದೆ. ನ್ಯಾಯಾಲಯದ ಮೂಲಕ ವಿಚಾರಣೆ ನಡೆಯುತ್ತಿರುವ ಈ ವಿಚಾರದಲ್ಲಿ ಯಾರೂ ಸಂಘರ್ಷಕ್ಕೆ ಇಳಿಯಬಾರದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT