ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಪೋಷಕರ ಆರೈಕೆ ಮಾಡದಿದ್ದರೆ ಆಸ್ತಿ ದಕ್ಕದು: ಸಚಿವ ಶರಣಪ್ರಕಾಶ್‌ ಪಾಟೀಲ

ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಚಿವ ಶರಣಪ್ರಕಾಶ್‌ ಪಾಟೀಲ ಸಭೆ
Published : 16 ಮಾರ್ಚ್ 2025, 14:17 IST
Last Updated : 16 ಮಾರ್ಚ್ 2025, 14:17 IST
ಫಾಲೋ ಮಾಡಿ
Comments
‘ಹಿರಿಯ ನಾಗರಿಕರ ಕಾಯ್ದೆಯಡಿ ಕ್ರಮ’
‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ– 2007ರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ದೂರುಗಳನ್ನು ಸಲ್ಲಿಸಬೇಕು’ ಎಂದು ಎಲ್ಲ ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ ಸೂಚನೆ ನೀಡಿದ್ದಾರೆ. ‘ಈ ಕಾನೂನಿನ ಬಗ್ಗೆ ಅನೇಕರಿಗೆ ಮಾಹಿತಿ ಇಲ್ಲ. ಹಿರಿಯ ನಾಗರಿಕರಿಗೆ ಮಕ್ಕಳು ಅಥವಾ ಸಂಬಂಧಿಕರು ಆರ್ಥಿಕ ಮತ್ತು ವೈದ್ಯಕೀಯ ಬೆಂಬಲ ನೀಡಬೇಕೆಂಬ ನಿಯಮವಿದೆ. ನಿಯಮ ಉಲ್ಲಂಘಿಸಿದರೆ ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕನ್ನು ಪೋಷಕರು ಹೊಂದಿದ್ದಾರೆ’ ಎಂದು ಅವರು ಹೇಳಿದ್ದಾರೆ. ‘ಮಕ್ಕಳು ಆನುವಂಶಿಕವಾಗಿ ಆಸ್ತಿಯನ್ನು ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಮರು ಪಡೆಯಲು ಈ ಕಾಯ್ದೆಯ ಸೆಕ್ಷನ್ 23ರ ಅಡಿ ಅವಕಾಶ ಕಲ್ಪಿಸಲಾಗಿದೆ’ ಎಂದೂ ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT