ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ 2008ನೇ ಇಸವಿಯದು. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದರು. ಎಚ್‌ಡಿಕೆ ಪ್ರಕರಣದ ತನಿಖೆಗೆ ಆಗ ಯಾಕೆ ಒತ್ತಾಯಿಸಿಲ್ಲ?, 2018ರಿಂದ 2019 ಮಧ್ಯಭಾಗದವರೆಗೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರು ಯಾರು?’ ಎಂದು ಪ್ರಶ್ನಿಸಿದರು.
‘ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ನಿಚ್ಚಳ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಯುತ್ತಿದೆ, ಅವರು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು