ಬೆಂಗಳೂರು: ‘ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್; ಬೆನ್ನುಹುರಿ, ಕಿಡ್ನಿ, ರಕ್ತ ಸಂಚಾರದಲ್ಲಿನ ಅಡಚಣೆಯಿಂದಾಗಿ ಪಾದಗಳಲ್ಲಿ ಮರಗಟ್ಟುವಿಕೆ ಮತ್ತು ಕೀಲು ಮೂಳೆ ಸಮಸ್ಯೆಯಿಂದ ತೀವ್ರವಾಗಿ ನರಳುತ್ತಿದ್ದು ಸೂಕ್ತ ಸಮಯದಲ್ಲಿ ಶಸ್ತ್ರಚಿಕಿತ್ಸೆ ನಡೆಸದೇ ಹೋದರೆ ಪಾರ್ಶ್ವವಾಯುವಿಗೆ (ಲಕ್ವ) ತುತ್ತಾಗುವ ಅಪಾಯವಿದ್ದು ಕೂಡಲೇ ಮಧ್ಯಂತರ ಜಾಮೀನು ನೀಡಬೇಕು’ ಎಂದು ಅವರ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ಹಿಂದಿನ ವಿಚಾರಣೆ ವೇಳೆ ಇದೇ ನ್ಯಾಯಪೀಠವು, ‘ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಬಳ್ಳಾರಿ ಜೈಲು ಅಧಿಕಾರಿಗೆ ನಿರ್ದೇಶಿಸಿತ್ತು. ಇದರ ಅನುಸಾರ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ತಂದಿದ್ದ ಮುಚ್ಚಿದ ಲಕೋಟೆಯಲ್ಲಿನ ವರದಿಯನ್ನು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ನ್ಯಾಯಪೀಠಕ್ಕೆ ಸಲ್ಲಿಸಿದರು.

ದರ್ಶನ್ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ‘ದರ್ಶನ್ ತೀವ್ರವಾದ ಆರೋಗ್ಯ ಸಮಸ್ಯೆಗಳಿಂದ ಒದ್ದಾಡುತ್ತಿದ್ದಾರೆ. ಅವರ ಬೆನ್ನುಹುರಿಯ ಸಮಸ್ಯೆಗೆ ಸಂಬಂಧಿಸಿದಂತೆ ಎಂಆರ್ಐ (ಮ್ಯಾಗ್ನೆಟಿಕ್ ರೆಸೊನಾನ್ಸ್ ಇಮೇಜಿಂಗ್) ಮತ್ತು ಸಿ.ಟಿ ಸ್ಕ್ಯಾನ್ (ಕಂಪ್ಯೂಟೆಡ್ ಟೊಮೊಗ್ರಫಿ) ಮಾಡಿಸಲಾಗಿದ್ದು, ತುರ್ತಾಗಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ವಿಷಯವನ್ನು ದರ್ಶನ್ ಅವರ ಸಂಬಂಧಿಗಳು ಜೈಲಿಗೆ ಹೋಗಿ ಅವರನ್ನು ಭೇಟಿ ಮಾಡಿ ಬಂದನಂತರ ನಮಗೆ ಗೊತ್ತಾಗಿದೆ’ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಸನ್ನಕುಮಾರ್, ‘ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸಲಾಗುತ್ತಿರುವ ಕಾರಣ ಇದರೊಳಗಿನ ಯಾವುದೇ ಮಾಹಿತಿಗಳು ನಮಗೆ ಗೊತ್ತಿಲ್ಲ. ಹೀಗಾಗಿ, ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಪ್ರಾಸಿಕ್ಯೂಷನ್ ಮುಚ್ಚಿದ ಲಕೋಟೆಯಲ್ಲಿ ನೀಡಿದ ವರದಿಯನ್ನು ತೆಗೆದು ಪರಿಶೀಲಿಸಿದ ನ್ಯಾಯಪೀಠ, ಇದಕ್ಕೆ ಉತ್ತರಿಸುವಂತೆ ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ (ಅ.29) ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.