ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ

Published 9 ಏಪ್ರಿಲ್ 2024, 12:43 IST
Last Updated 9 ಏಪ್ರಿಲ್ 2024, 12:43 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ (ಏಪ್ರಿಲ್ 10) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT