ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರಾಣ ನಿಗಮದ ಗೋದಾಮು ನಿರ್ಮಾಣ ಅಕ್ರಮ: ಅಧಿಕಾರಿಗಳ ವಿರುದ್ಧ ಕ್ರಮ

ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
Published 6 ಅಕ್ಟೋಬರ್ 2023, 5:25 IST
Last Updated 6 ಅಕ್ಟೋಬರ್ 2023, 5:25 IST
ಅಕ್ಷರ ಗಾತ್ರ

ಬೆಂಗಳೂರು: ಉಗ್ರಾಣ ನಿಗಮದ ಗೋದಾಮುಗಳ ನಿರ್ಮಾಣದಲ್ಲಿ ಅಕ್ರಮಗಳು ನಡೆದಿರುವುದರಿಂದ ಐಎಎಸ್ ಅಧಿಕಾರಿಗಳೂ ಸೇರಿ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲು ಹಾಗೂ ವಿಳಂಬಕ್ಕೆ ಕಾರಣರಾದ ಸಹಕಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಅಧಿಕಾರಿಗಳಾದ ಎಂ.ಬಿ.ರಾಜೇಶ್‌ಗೌಡ, ಜಯವಿಭವಸ್ವಾಮಿ, ನವೀನ್‌ಕುಮಾರ್, ಹನುಮಂತರಾಯಪ್ಪ, ಎಂ.ಎಸ್‌.ಅಲಿಪುರ ಅವರ ಮೇಲೆ ಕ್ರಿಮಿನಲ್ ಮತ್ತು ಸಿವಿಲ್ ಮೊಕದ್ದಮೆ ಜರುಗಿಸಲಾಗುವುದು. ಆರ್ಥಿಕ ಅಶಿಸ್ತು, ನಿರ್ಮಾಣದಲ್ಲಿ ವಿಳಂಬ, ಮುಂಗಡವನ್ನು ಹೆಚ್ಚಳವಾಗಿ ಕೊಟ್ಟಿರುವುದು ಕಂಡು ಬಂದಿದೆ. ಇದರಿಂದ ಬೊಕ್ಕಸಕ್ಕೆ ನೂರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅವರು ಹೇಳಿದರು. 

ಉಗ್ರಾಣ ನಿಗಮದ ಆರ್‌ಐಡಿಎಫ್‌–22 ಯೋಜನೆಯಡಿ ಅಪೂರ್ಣಗೊಂಡ ಉಗ್ರಾಣಗಳ ನಿರ್ಮಾಣ ಮತ್ತು ಅವಶ್ಯವಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹376.54 ಕೋಟಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಯಿತು ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT