ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾಲದಲ್ಲಿ ಹಣ ಅಕ್ರಮ ವರ್ಗಾವಣೆ ದಾಖಲೆಗಳು ಸಿಕ್ಕಿವೆ: ಡಿ.ಕೆ. ಶಿವಕುಮಾರ್

Published 6 ಜೂನ್ 2024, 15:54 IST
Last Updated 6 ಜೂನ್ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಅಧಿಕಾರದ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಹಣ ಅಕ್ರಮವಾಗಿ ಹಣ ವರ್ಗಾವಣೆಯ ಕೆಲವು ಪ್ರಕರಣಗಳ ಬಗ್ಗೆ ಗೌಪ್ಯವಾಗಿ ಲೋಕಾಯುಕ್ತ ಸೇರಿದಂತೆ ಇತರ ತನಿಖೆಗಳು ನಡೆದಿವೆ. ಕೆಲವು ಪ್ರಕರಣಗಳಲ್ಲಿ ಹಣ ‌ಮರಳಿ ಬಂದಿದೆ’ ಎಂದರು.

‘ಗಮನಕ್ಕೆ ಬರುವ ಈ ರೀತಿಯ ಎಲ್ಲ ಪ್ರಕರಣಗಳನ್ನು ಪರಿಶೀಲಿಸಲಾಗುವುದು. ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ಮೇಲೆ ಮಾಡಿರುವ ಆರೋಪವನ್ನೂ ಪರಿಶೀಲಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT