ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹98 ಕೋಟಿ ಮೌಲ್ಯದ ಅಕ್ರಮ ಮದ್ಯ: ಕಾಯ್ದಿರಿಸಿದ ತೀರ್ಪು

Published : 18 ಸೆಪ್ಟೆಂಬರ್ 2024, 16:13 IST
Last Updated : 18 ಸೆಪ್ಟೆಂಬರ್ 2024, 16:13 IST
ಫಾಲೋ ಮಾಡಿ
Comments

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ₹ 98 ಕೋಟಿ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಪ್ರಕರಣದಲ್ಲಿ, ನಂಜನಗೂಡು ವ್ಯಾಪ್ತಿಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೀವರಿಸ್ ಲಿಮಿಟೆಡ್ ಕಂಪನಿ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದ ಮೇಲಿನ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

‘ನಂಜನಗೂಡು ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಂಜನಗೂಡು ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಯುನೈಟೆಡ್ ಬ್ರೀವರಿಸ್ ಲಿಮಿಟೆಡ್ ಕಂಪನಿ ಪ್ರತಿನಿಧಿ ಎಂ.ವಿ.ಕಾರ್ತಿಕ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿ ಆದೇಶಿಸಿತು.

ಅಂತೆಯೇ, ತೀರ್ಪು ಪ್ರಕಟವಾಗುವವರೆಗೆ ಪ್ರಕರಣದ ವಿಚಾರಣೆಗೆ ಸಂಪೂರ್ಣ ತಡೆ ನೀಡಿತು. ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್‌ ಜೆ.ಚೌಟ ಹಾಗೂ ಪ್ರಾಸಿಕ್ಯೂಷನ್ ಪರ ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್.ಜಗದೀಶ್ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT