ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5ರಷ್ಟು ಹೆಚ್ಚಳಕ್ಕೆ ಶಿಫಾರಸು

ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
Published 16 ಮಾರ್ಚ್ 2024, 6:38 IST
Last Updated 16 ಮಾರ್ಚ್ 2024, 6:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು, ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ₹17,000ಗಳಿಂದ ₹27,000ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT