ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಸ್ತೃತ ಚರ್ಚೆ ನಂತರ ಜಾತಿ ಗಣತಿ ಅನುಷ್ಠಾನ: ತಂಗಡಗಿ

Published 2 ಜುಲೈ 2024, 16:30 IST
Last Updated 2 ಜುಲೈ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ವಿಸ್ತೃತ ಚರ್ಚೆ ನಡೆಸಿದ ನಂತರ ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಚಿಂತನೆ ನಡೆಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿಯನ್ನು ಈಗಾಗಲೇ ಸ್ವೀಕರಿಸಿದ್ದಾರೆ. ಪೂರ್ಣ ಪ್ರಮಾಣದ ಚರ್ಚೆಯ ನಂತರ ಸದನದಲ್ಲಿ ಮಂಡಿಸುವ ಕುರಿತು ಮುಖ್ಯಮಂತ್ರಿ ನಿರ್ಧರಿಸುವರು ಎಂದರು.

‘ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ನನಗಿಂತ ಹಿರಿಯ ನಾಯಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ನನಗೆ ಕೊಟ್ಟಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಡಿ.ಕೆ. ಶಿವಕುಮಾರ್ ಅವರು ಪಕ್ಷವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಬದಲಾವಣೆಯ ಪ್ರಸ್ತಾಪವಾಗಿಲ್ಲ. ಅಂತಹ ವಿಷಯಗಳನ್ನು ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT