ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ನ ಪ್ರಕಾಶ್ ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿದ್ದಾಗ 2016ರಲ್ಲಿ ಕರ್ನಾಟಕ ರಾಜ್ಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ತರಲಾಗಿತ್ತು. ಗ್ರಾಮ ಸರ್ಕಾರದ ಆಶಯದ ಜತೆಗೆ, ಸ್ಥಳೀಯ ಸಂಸ್ಥೆಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗಗಳು, ಮಹಿಳೆಯರಿಗೆ ನೀಡಿದ್ದ ಮೀಸಲಾತಿ ಬಳಸಿಕೊಂಡು ರಾಜ್ಯದ ನೂರಾರು ಸಣ್ಣಪುಟ್ಟ ಸಮುದಾಯಗಳ ಜನರು ಗ್ರಾಮ ಗದ್ದುಗೆಯ ಮೇಲೆ ಕುಳಿತಿದ್ದಾರೆ. ಅವರಿಗೆ ಸಮರ್ಪಕ ಅಧಿಕಾರ ಹಂಚಿಕೆಯ ಸೂತ್ರಗಳನ್ನು ರಚಿಸಲು ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಆದಷ್ಟು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು’ ಎಂದರು.

1995ಕ್ಕಿಂತಲೂ ಹಿಂದಿನ ಶಾಲೆಗಳಲ್ಲಿ ಏಳು ಶಾಲೆಗಳಿಗೆ ಅನುದಾನ ದೊರಕಿಸುವಂತೆ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕಾಂಗ್ರೆಸ್ನ ಐವನ್ ಡಿಸೋಜ, ಪುಟ್ಟಣ, ಬಿಜೆಪಿಯ ಎಸ್.ವಿ. ಸಂಕನೂರ, ಎಸ್.ಎಲ್. ಬೋಜೇಗೌಡ ಅವರು ಒತ್ತಾಯಿಸಿದರು.

ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳಿಗೆ ಪ್ರತ್ಯೇಕ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.