ಬೆಂಗಳೂರು: ರಾಜ್ಯದಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆಗಳನ್ನು ವಿಲೇವಾರಿ ಮಾಡಿದ ಬಳಿಕ ಅಂತಿಮ ಅಧಿಸೂಚನೆ ಪ್ರಕಟಿಸಲಾಗುವುದು' ಎಂದರು.

ಹಿಂದಿನ ಐದು ವರ್ಷಗಳಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಪರಿಷ್ಕರಣೆ ಆಗಿರಲಿಲ್ಲ. ಹಿಂದೆ ದರಗಳಲ್ಲಿ ಬಹಳ ವ್ಯತ್ಯಾಸಗಳಿದ್ದವು. ಈಗ ಆ ವ್ಯತ್ಯಾಸಗಳನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಶೇಕಡ 20ರಿಂದ ಶೇ 50ರವರೆಗೂ ಹೆಚ್ಚಳ ಮಾಡಲಾಗಿದೆ. ಸರಾಸರಿ ಶೇ 30ರಷ್ಟು ದರ ಹೆಚ್ಚಳ ಮಾಡಲಾಗಿದೆ. ಇದರಿಂದ ಕಪ್ಪು ಹಣದ ವಹಿವಾಟಿನ ನಿಯಂತ್ರಣಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ದರ ಪರಿಷ್ಕರಣೆಯಿಂದ ಆರಂಭಿಕ ಹಂತದಲ್ಲಿ ಸ್ಥಿರಾಸ್ತಿ ಖರೀದಿ, ಮಾರಾಟದ ನೋಂದಣಿ ತುಸು ಕಡಿಮೆ ಆಗಬಹುದು. ನಂತರ ಸುಧಾರಣೆ ಆಗಲಿದೆ. ನೋಂದಣಿ ಶುಲ್ಕ ಸಂಗ್ರಹದಲ್ಲಿ ಅಂದಾಜು ₹2,000 ಕೋಟಿಗೂ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದರು.

ಆ್ಯಪ್ ಸಿದ್ಧ: ಸರ್ಕಾರಿ ಜಮೀನುಗಳ ಸಮಗ್ರ ಮಾಹಿತಿ ಸಂಗ್ರಹ ಮತ್ತು ರಕ್ಷಣೆಗಾಗಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲೇ ಅದನ್ನು ಬಳಕೆಗೆ ತರಲಾಗುವುದು ಎಂದು ತಿಳಿಸಿದರು.

ಗ್ರಾಮ ಲೆಕ್ಕಿಗರು ತಮ್ಮ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನುಗಳ ವಿವರಗಳನ್ನು ಜಿಪಿಎಸ್ ಮಾಹಿತಿ ಸಮೇತ ದಾಖಲಿಸಬೇಕು. ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿನೀಡಿ ಫೋಟೊ ಸಮೇತ ಮಾಹಿತಿ ಅಪ್ಲೋಡ್ ಮಾಡಬೇಕು ಎಂದರು.

ಸರ್ಕಾರಿ ಜಮೀನುಗಳ ಕಬಳಿಕೆ ತಡೆಯಲು ಕಂದಾಯ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ತಂಡವೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.