ಬೆಂಗಳೂರು: ‘ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ದಿ ಚಾನ್ಸೆರಿ ಪೆವಿಲಿಯನ್’ ಹೋಟೆಲ್ನಲ್ಲಿ ಸೋಮವಾರ ನಡೆದ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘2013ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ’ ಎಂದರು.

‘ಮಹಿಳಾ ಕಾಂಗ್ರೆಸ್ನಲ್ಲಿ 1 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದು, ಭವಿಷ್ಯದಲ್ಲಿ ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪ ಚುನಾವಣೆ ಸಮೀಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಉಪ ಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಿದ್ದು ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲಕಾ ಲಂಬಾ, ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ ರಾಜಣ್ಣ, ಮಹಿಳಾ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಸೋಫಿಯಾ ಜುಬೇರಾ, ಪ್ರಧಾನ ಕಾರ್ಯದರ್ಶಿ ಸೆವಾ ಸೆಲ್ವಾನ್, ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಶಾಸಕಿ ನಯನ ಮೋಟಮ್ಮ, ಮಾಜಿ ಸಚಿವೆ ರಾಣಿ ಸತೀಶ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.