ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಕುಮಾರಸ್ವಾಮಿ

Last Updated 1 ಡಿಸೆಂಬರ್ 2019, 7:41 IST
ಅಕ್ಷರ ಗಾತ್ರ

ಗೋಕಾಕ: ‘ಡಿಸೆಂಬರ್ 9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಗೋಕಾಕ ಜೆಡಿಎಸ್‌ ಅಭ್ಯರ್ಥಿ ಅಶೋಕ ಪೂಜಾರಿ ಕೇವಲ ಶಾಸಕರಾಗಲಷ್ಟೇ ಚುನಾವಣೆಗೆ ನಿಂತಿಲ್ಲ. ಅವರು ಮುಂದಿನ ದಿನಗಳಲ್ಲಿ ಮಂತ್ರಿಯಾಗುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಅತಿಶಯೋಕ್ತಿ ಏನಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಹಿರೇನಂದಿ ಗ್ರಾಮದಲ್ಲಿ ಭಾನುವಾರ ಪಕ್ಷದ ಅಭ್ಯರ್ಥಿ ಪರ ಮತಯಾಚಿಸುವ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ, ‘ಉಪ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಮತದಾರರು ಕಿಂಗ್‌ ಮೇಕರ್‌ಗಳಾಗಲಿದ್ದಾರೆ. ನಾನು ಅಥವಾ ಜೆಡಿಎಸ್‌ ಅಲ್ಲ’ ಎಂದರು.

‘ಹನಿಟ್ರ್ಯಾಪ್‌ನ ಆಧಾರದ ಮೇಲೆ ಚುನಾವಣೆ ನಡೆಯುತ್ತಿಲ್ಲ. ನಾನು ಮಾಡಿದ ಜನಪರ ಕಾರ್ಯಕ್ರಮಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ. ನನ್ನ ಶಾಸಕರು ಯಾರಾದರೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಇದ್ದರೆ, ಆಡಳಿತದಲ್ಲಿರುವ ಬಿಜೆಪಿಯವರು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

‘ಹಿರೇನಂದಿ ಊರೊಂದರಲ್ಲೇ ರೈತರ ₹ 1.80 ಕೋಟಿ ಸಾಲ ಮನ್ನಾ ಆಗಿದೆ. ನಮ್ಮ ಅಭ್ಯರ್ಥಿ ದೊಡ್ಡ ಸಕ್ಕರೆ ಕಾರ್ಖಾನೆ ಕಟ್ಟಿಲ್ಲ, ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡು ಸಾಹುಕಾರ್‌ಗಿರಿ ಮಾಡುತ್ತಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ವಿರುದ್ಧ ಹರಿಹಾಯ್ದರು.

ಗ್ರಾಮದ ನಂದೀಶ್ವರನ ದರ್ಶನ ಪಡೆದು ರೋಡ್ ಶೋ ನಡೆಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT