ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5,815 ಮಂದಿ ಕೋವಿಡ್ ಪೀಡಿತರಾಗಿರುವುದು ಶನಿವಾರ ದೃಢಪಟ್ಟಿದೆ. 27 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿದ್ದು, ಸೋಂಕು ದೃಢ ಪ್ರಮಾಣವು ಶೇ 3.78ಕ್ಕೆ ಇಳಿಕೆಯಾಗಿದೆ.

9 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆಯು ಗುರುತಿಸಿದ ಹೊಸ ತಳಿಯ ವೈರಾಣುಗಳು ರಾಜ್ಯದಲ್ಲಿ ಕೂಡ ಕೆಲವರಲ್ಲಿ ಕಾಣಿಸಿಕೊಳ್ಳುತ್ತಿದೆ. ಅಮೆರಿಕಾ ಮೂಲಕ ಆಲ್ಫಾ/ಬಿ.1.1.7 ವೈರಾಣು ಈವರೆಗೆ 127 ಮಂದಿಯಲ್ಲಿ ಪತ್ತೆಯಾಗಿದೆ. ಅದೇ ರೀತಿ, ದಕ್ಷಿಣ ಆಫ್ರಿಕಾ ಮೂಲದ ಬೀಟಾ/ಬಿ.1.351 ವೈರಾಣು ಆರು ಮಂದಿಯಲ್ಲಿ, ನಮ್ಮ ದೇಶದ ಡೆಲ್ಟಾ/ಬಿ.1.617.2 ವೈರಾಣು 318 ಮಂದಿಯಲ್ಲಿ ಹಾಗೂ ಕಪ್ಪಾ/ಬಿ.1.617.1 ವೈರಾಣು 112 ಮಂದಿಯಲ್ಲಿ ಕಾಣಿಸಿಕೊಂಡಿರುವುದು ಜಿನೋಮಿಕ್ ಸಿಕ್ವೆನ್ಸೀಸ್ ಪರೀಕ್ಷೆಯಿಂದ ದೃಢಪಟ್ಟಿದೆ.

ಈ ತಿಂಗಳು 19 ದಿನಗಳಲ್ಲಿ 1.97 ಲಕ್ಷ ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.