ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿದ, ಸಿಬಿಐ ತನಿಖೆ ಎದುರಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ಐದು ವರ್ಷಗಳ ನಿಷೇಧ, ಸಮಿತಿಯ ಸದಸ್ಯರಿಗೆ ಜೀವತಾವಧಿ ನಿಷೇಧ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ಹೇಳಿದೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಂಡಳಿ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ‘ನ್ಯಾಕ್’ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು, ಭ್ರಷ್ಟಾಚಾರ ನಿಯಂತ್ರಿಸಲು ಬೈನರಿ ಮಾನ್ಯತೆ ಮತ್ತು ಪ್ರಬುದ್ಧತಾ ಹಂತವನ್ನು ಬರುವ ಏಪ್ರಿಲ್ನಿಂದಲೇ ಜಾರಿಗೊಳಿಸಲಾಗುತ್ತಿದೆ. ನ್ಯಾಕ್ ಮಾನ್ಯತೆ ಪಡೆಯದ ಹೊಸ ಕಾಲೇಜುಗಳು ಬೈನರಿ ಮಾನ್ಯತೆ ಕೋರಿ ಅರ್ಜಿ ಸಲ್ಲಿಸಬಹುದು. ಹೊಸ ಮಾನ್ಯತಾ ಪರಿಕಲ್ಪನೆಗಳ ಜಾರಿಯ ನಂತರ ಹಿಂದಿನ ನ್ಯಾಕ್ ಶ್ರೇಣಿ ಪದ್ಧತಿಗಳು ಕ್ರಮೇಣ ರದ್ದಾಗಲಿವೆ ಎಂದು ಮಾಹಿತಿ ನೀಡಿದೆ.

ಪ್ರಕರಣದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳು ಐದು ವರ್ಷ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಸಮಿತಿಯ ಸದಸ್ಯರನ್ನು ಮೌಲ್ಯಮಾಪನ ಕಾರ್ಯಗಳಿಂದಲೂ ಹೊರಗಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ಹೇಳಿದೆ.

ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್ ಫೌಂಡೇಷನ್ (ಕೆಎಲ್ಇಎಫ್) ನ್ಯಾಕ್ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಮಿತಿಯ ಏಳು ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಗಾಯತ್ರಿ ದೇವರಾಜ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಐಕ್ಯುಎಸಿ–ನ್ಯಾಕ್ ನಿರ್ದೇಶಕ ಎಂ.ಹನುಮಂತಪ್ಪ ಸಹ ಸಮಿತಿಯಲ್ಲಿದ್ದರು. ಈ ಸಮಿತಿ ಭೇಟಿ ನೀಡಿದ್ದ ಕಾಲೇಜುಗಳಿಗೆ ಪುನರ್ಪರಿಶೀಲನೆಗಾಗಿ ಮತ್ತೊಂದು ಸಮಿತಿ ಕಳುಹಿಸಿಕೊಡಲು ಮಂಡಳಿ ಕಾರ್ಯಕಾರಿ ಸಮಿತಿ ಸಭೆ ತೀರ್ಮಾನ ತೆಗೆದುಕೊಂಡಿದೆ.

ವಿಶ್ವವಿದ್ಯಾಲಯದಲ್ಲಿನ ಮೂಲಸೌಕರ್ಯಗಳು, ಸಂಶೋಧನೆ, ವೈಜ್ಞಾನಿಕ ಉಪಕರಣಗಳು, ಬೋಧನೆ, ಸಂಶೋಧನೆಗಳಿಗೆ ಪೇಟೆಂಟ್ ಬಂದಿರುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳ ಮಂಡನೆ, ಕಲಿಕೆ, ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗೆ ತಂತ್ರಜ್ಞಾನದ ಅಳವಡಿಕೆ ಮತ್ತಿತರ ಅಂಶಗಳನ್ನು ಆಧರಿಸಿ ನ್ಯಾಕ್ ಸಮಿತಿಯು ಅಂಕ ಮತ್ತು ಗ್ರೇಡ್ಗಳನ್ನು ನೀಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.