ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಮಾಜಿ ಶಾಸಕ ಅನಿಲ್‌ ಲಾಡ್‌ ಮೇಲೆ ಐಟಿ ದಾಳಿ ‌

Last Updated 30 ಏಪ್ರಿಲ್ 2019, 17:05 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ಅನಿಲ್‌ ಎಚ್‌. ಲಾಡ್‌ ಅವರು ತಂಗಿರುವಬಳ್ಳಾರಿಯ ಖಾಸಗಿ ಹೊಟೇಲ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಈ ಕುರಿತು ರಾಷ್ಟ್ರೀಯಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದ್ದು, ಸದ್ಯ ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ಲಾಡ್‌ ಕೊಠಡಿಯಲ್ಲಿಪರಿಶೀಲನೆ ಮುಂದುವರಿಸಿದ್ದಾರೆ.

ಅನಿಲ್‌ ಲಾಡ್‌ ಅವರು ಬಳ್ಳಾರಿ ನಗರದ ಹೊಟೇಲ್‌ವೊಂದರಲ್ಲಿ ತಂಗಿದ್ದರು. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಮಂಡ್ಯ ಮತ್ತು ಹಾಸನದ ಜೆಡಿಎಸ್‌ ಮುಖಂಡರ ಮನೆಗಳ ಮೇಲೆ ದಾಳಿ ನಡೆದ ಬೆಳವಣಿಗೆ ದೇಶಾದ್ಯಂತ ತೀವ್ರ ಚರ್ಚೆ ಮತ್ತು ಪ್ರತಿರೋಧಕ್ಕೆ ಕಾರಣವಾದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಲಾಡ್‌ ಮೇಲೆ ಮಂಗಳವಾರ ಈ ದಾಳಿ ನಡೆದಿದೆ.

ಅತ್ತ ಆಂಧ್ರ ಪ್ರದೇಶದಲ್ಲಿಯೂ ಗುಂಟೂರು ಲೋಕಸಭೆ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಗಲ್ಲಾ ಜಯದೇವ ಅವರ ಮನೆ ಮೇಲೆ ಮಂಗಳವಾರ ರಾತ್ರಿ ಅದಾಯ ತೆರಿಗೆ ಇಲಾಖೆಯ ದಾಳಿ ನಡೆದಿದೆ.

ಇನ್ನಷ್ಟು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT