ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಹನುಮಂತಯ್ಯ ಕಳವಳ

Published 7 ಡಿಸೆಂಬರ್ 2023, 15:46 IST
Last Updated 7 ಡಿಸೆಂಬರ್ 2023, 15:46 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ರಾಜ್ಯಸಭಾ ಸದಸ್ಯ ಎಲ್‌. ಹನುಮಂತಯ್ಯ ಕಳವಳ ವ್ಯಕ್ತಪಡಿಸಿದರು. 

ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಗುರುವಾರ ವಿಷಯ ಪ್ರಸ್ತಾಪಿಸಿದ ಅವರು, ‘ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ ಒಂದು ವರ್ಷದಲ್ಲಿ ದಲಿತರ ಮೇಲಿನ ದೌರ್ಜನ್ಯಗಳಲ್ಲಿ ಶೇ 13ರಷ್ಟು ಏರಿಕೆಯಾಗಿದೆ’ ಎಂದರು.

‘2020ರಲ್ಲಿ 50,291, 2021ರಲ್ಲಿ 50,900 ಹಾಗೂ 2022ರಲ್ಲಿ 57,582 ಪ್ರಕರಣಗಳು ವರದಿಯಾಗಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಹೆಚ್ಚು ಪ್ರಕರಣಗಳು ನಡೆಯುತ್ತಿವೆ. ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಗಣನೀಯವಾಗಿ ಜಾಸ್ತಿ ಆಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಈ ರೀತಿಯ ಮಾನವ ಹತ್ಯಾಕಾಂಡವನ್ನು ತಡೆಯಲು ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT