ಮಾಣೆಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆ ಇದೆ. ಕಾರ್ಯಕ್ರಮಕ್ಕೆ ಬರುವವರು ನಮ್ಮ ಮೆಟ್ರೊ ಬಳಸಬೇಕು
ಸೀಮಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್
ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ
ಮಹೇಶ್ವರರಾವ್, ಮುಖ್ಯ ಆಯುಕ್ತ, ಬಿಬಿಎಂಪಿ
ಕಾರ್ಯಕ್ರಮಕ್ಕೆ ಬರುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯ ಜತೆಗೆ ಗುರುತಿನ ಚೀಟಿಯನ್ನು ಹಾಜರು ಪಡಿಸಬೇಕು. ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ