ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Independence Day: ಹಿಂಬಾಗಿಲ ರಾಜಕಾರಣವನ್ನು ರಾಜ್ಯದ ಜನರು ಕ್ಷಮಿಸಿಲ್ಲ –ಸಿಎಂ

ರಾಜ್ಯಕ್ಕೆ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆ
Published : 15 ಆಗಸ್ಟ್ 2024, 4:57 IST
Last Updated : 15 ಆಗಸ್ಟ್ 2024, 4:57 IST
ಫಾಲೋ ಮಾಡಿ
Comments

ಬೆಂಗಳೂರು: ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಜನಕಲ್ಯಾಣ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಮಾಣೆಕ್ ಶಾ ಮೈದಾನದಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ, ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸಲಾಗುತ್ತಿದೆ. ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿರುವುದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಾದರೂ ಕೇಂದ್ರ ಸರ್ಕಾರವು, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ರಾಜ್ಯಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆ ಎಂದರು.

ಅಂತೆಯೇ ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಾಡಿನ ಮಹಾ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ವಿರೋಧಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕೆಂಬುದನ್ನು ಎಲ್ಲರೂ ನಿರೀಕ್ಷಿಸುತ್ತಾರೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿರುವ ಮತದಾರರು, ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT