ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹ್ಯಾಕಾಶ ಕ್ಷೇತ್ರದಲ್ಲಿ ಸಹಕಾರ ವೃದ್ಧಿಗೆ ಭಾರತ– ಇಸ್ರೇಲ್‌ ಚರ್ಚೆ

Last Updated 23 ಫೆಬ್ರುವರಿ 2022, 15:54 IST
ಅಕ್ಷರ ಗಾತ್ರ

ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರದಲ್ಲಿ ಸಹಕಾರ ವಿಸ್ತರಣೆ ನಿಟ್ಟಿನಲ್ಲಿ ಭಾರತ ಮತ್ತು ಇಸ್ರೇಲ್‌ ಚರ್ಚೆ ಆರಂಭಿಸಿವೆ. ಭಾರತದಲ್ಲಿನ ಇಸ್ರೇಲ್‌ ರಾಯಭಾರಿ ನಾಯೋರ್‌ ಗಿಲೋನ್‌ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್‌. ಸೋಮನಾಥ್‌ ಅವರನ್ನು ಬುಧವಾರ ಭೇಟಿಮಾಡಿ ಮಾತುಕತೆ ನಡೆಸಿದರು.

‘ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಗೆ ಪೂರಕವಾಗಿ ಚರ್ಚೆ ನಡೆಯುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತು ಇಸ್ರೇಲ್‌ ನಡುವಿನ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಬುಧವಾರದ ಸಭೆಯಲ್ಲಿ ಚರ್ಚಿಸಲಾಗಿದೆ’ ಎಂದು ಇಸ್ರೊ ಪ್ರಕಟಣೆ ತಿಳಿಸಿದೆ.

ಇಸ್ರೊ ಮತ್ತು ಇಸ್ರೇಲ್‌ ಬಾಹ್ಯಾಕಾಶ ಸಂಸ್ಥೆಗಳು ಜತೆಯಾಗಿ ಕೆಲಸ ಮಾಡಲು ಇರುವ ಉತ್ತಮ ಅವಕಾಶಗಳ ಕುರಿತು ಚರ್ಚೆ ನಡೆಸಲಾಗಿದೆ. ಸಣ್ಣ ಉಪಗ್ರಹಗಳಿಗೆ ಇಂಧನ ಪೂರೈಸುವ ‘ಎಲೆಕ್ಟ್ರಿಕ್‌ ಪ್ರೊಪಲ್ಶನ್‌ ಸಿಸ್ಟಂ’ (ಇಪಿಎಸ್‌) ಮತ್ತು ಭೂ ವೀಕ್ಷಣಾ ಉಪಗ್ರಹಗಳಿಗೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಜಂಟಿ ಸಹಭಾಗಿತ್ವದ ಯೋಜನೆಗಳ ಕುರಿತು ಕಳೆದ ವರ್ಷ ಪರಿಶೀಲನೆ ನಡೆಸಲಾಗಿತ್ತು. ಈ ಬಾರಿ, ಭಾರತದ ಉಡ್ಡಯನ ಕೇಂದ್ರಗಳಿಂದ ಇಸ್ರೇಲ್‌ ಉಪಗ್ರಹಗಳನ್ನು ಉಡಾವಣೆ ಮಾಡುವ ಕುರಿತೂ ಚರ್ಚಿಸಲಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT