ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಗೆ ಅನುಮತಿ ಬೇಡ’

ಶಸ್ತ್ರಚಿಕಿತ್ಸೆಗೆ ಆಯುರ್ವೇದ ವೈದ್ಯರಿಗೆ ಅನುಮತಿ
Last Updated 5 ಫೆಬ್ರುವರಿ 2021, 20:09 IST
ಅಕ್ಷರ ಗಾತ್ರ

ಬೆಂಗಳೂರು: ‘ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಇಂಡಿಯನ್‌ ಮೆಡಿಸಿನ್‌ (ಸಿಸಿಐಎಂ), ತಾನು ಹೊರಡಿಸಿರುವ ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮಾವಳಿಗಳ ಅಧಿಸೂಚನೆಯನ್ನು ಶೀಘ್ರವೇ ಹಿಂಪಡೆಯಬೇಕು’ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜಯಲಾಲ್‌ ಒತ್ತಾಯಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಆಯುರ್ವೇದ ವೈದ್ಯರಿಗೆ ಆಧುನಿಕ ವೈದ್ಯ ಪದ್ಧತಿಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲು ಅನುವು ಮಾಡಿಕೊಟ್ಟಿರುವುದು ಖಂಡನಾರ್ಹ. ಮಿಶ್ರ ವೈದ್ಯಕೀಯ ಪದ್ಧತಿಯು ಜನಸಾಮಾನ್ಯರಿಗೆ ಮಾರಕವಾಗಲಿದೆ’ ಎಂದರು.

‘ದೇಶದಲ್ಲಿ ಸುಮಾರು 460 ಆಯುರ್ವೇದ ಕಾಲೇಜುಗಳಿವೆ. ಇವೆಲ್ಲವೂ ಪ್ರಭಾವಿ ರಾಜಕಾರಣಿ, ಉದ್ಯಮಿ
ಗಳ ಒಡೆತನ ಹೊಂದಿವೆ. ಆ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಇದ್ದು, ಹೊಸ ಕಾನೂನು ಜಾರಿಗೊಳಿ
ಸುವ ಮೂಲಕ ಆ ಕಾಲೇಜುಗಳ ದಾಖಲಾತಿ ಹೆಚ್ಚಿಸಿಕೊಳ್ಳಲು ಷಡ್ಯಂತ್ರ ಮಾಡಲಾಗಿದೆ’ ಎಂದು ಕಿಡಿಕಾರಿದರು.

ಐಎಂಎ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ.ಎಂ.ವೆಂಕಟಾಚಲಪತಿ, ಕಾರ್ಯದರ್ಶಿ ಡಾ.ಎಸ್‌.ಎಂ.ಪ್ರಸಾದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT