ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದಿಂದ ಕಾರ್ಮಿಕರಿಗೆ ಅನ್ಯಾಯ: ಸಲೀಂ ಅಹಮದ್‌

Published 7 ಜನವರಿ 2024, 16:15 IST
Last Updated 7 ಜನವರಿ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಟ್ಟಿದ್ದ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಆರೋಪಿಸಿದರು.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ರಾಜ್ಯ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ (ಇಂಟಕ್ ) ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಖಾತೆಗಳಿಗೆ ₹ 15 ಲಕ್ಷ ಜಮೆ, ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿ ಮೋಸ ಮಾಡಿದೆ’ ಎಂದರು.

‘ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರದ ಬಿಜೆಪಿ ಸರ್ಕಾರವು ಕಾರ್ಮಿಕರನ್ನು ನಿರ್ಲಕ್ಷಿಸಿದೆ. ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರ ಮಾಲೀಕರ ಪರವಾಗಿದೆ. ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿಯಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಧೋರಣೆಯ ಬಗ್ಗೆ ಮನೆ ಮನೆಗೆ ಮುಟ್ಟಿಸಬೇಕು’ ಎಂದರು.

‘ಇಂಟಕ್ ಸಂಘಟಿತಗೊಂಡು ಪಕ್ಷವನ್ನು ಬಲಪಡಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ರಾಜ್ಯದಲ್ಲಿ ಕನಿಷ್ಠ 20 ಸೀಟುಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT