ಬೆಂಗಳೂರು: ‘ಒಂದು ಕುಟುಂಬದ ಓಲೈಕೆಯೇ ನಿಮ್ಮ ಸಂಸ್ಕೃತಿಯೇ? ಇಂದಿರಾ ಕ್ಯಾಂಟೀನ್ ಬದಲು ನಾಡಿನ ಅನ್ನದ ದೇವತೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಯಾಕಾಗಬಾರದು? ಇಲ್ಲಿನ ಮಣ್ಣಿನ ಮಗನ ಹೆಸರಿಡಬಹುದಿತ್ತಲ್ಲವೇ?’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶಭಕ್ತ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ಸಿಗರಿಗೆ ನಾನು ಇಂದಿರಾಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಭಾರೀ ಕೋಪ ಬಂದಿದೆ’ ಎಂದು ಹೇಳಿದ್ದಾರೆ.

‘ರಾಷ್ಟ್ರವಾದಿ ವೀರ ಸಾವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ. ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ ‘ಇಂದಿರಾ ಕ್ಯಾಂಟೀನ್’ ಸ್ಥಾಪಿಸುವ ಅವಶ್ಯಕತೆ ಏನಿತ್ತು? ಇದರ ಬಗ್ಗೆ ಕಾಂಗ್ರೆಸ್ಸಿಗರು ಉತ್ತರಿಸುವರೇ?’ ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

‘ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿ, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು. ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ. ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ... ದೇಶಕ್ಕೆ ನೆಹರೂ, ಇಂದಿರಾ ಗಾಂಧಿ ಮಾತ್ರ ಕೊಡುಗೆ ಕೊಟ್ಟಿದ್ದಾರೆಯೇ?: ಸಿ.ಟಿ.ರವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.