ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ: ಬಾಕಿ ಪ್ರಕರಣ ತ್ವರಿತ ಇತ್ಯರ್ಥ–ಎಂ.ಬಿ.ಪಾಟೀಲ

Published 2 ಜೂನ್ 2023, 0:13 IST
Last Updated 2 ಜೂನ್ 2023, 0:13 IST
ಅಕ್ಷರ ಗಾತ್ರ

ಬೆಂಗಳೂರು: 'ಕೆಐಎಡಿಬಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸುವುದು ತಮ್ಮ ಮೊದಲ ಆದ್ಯತೆ. ಈ ಸಂಬಂಧ ಅಧಿಕಾರಿಗಳು ಇನ್ನು ಒಂದು ವಾರದೊಳಗೆ ಸರಿಯಾದ ಅಂಕಿ–ಅಂಶ ಮತ್ತು ವಿವರಗಳನ್ನು ನೀಡಬೇಕು' ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕಾ ಇಲಾಖೆಯ ವ್ಯಾಪ್ತಿಗೆ ಸೇರಿದ ಪ್ರಾಧಿಕಾರ, ನಿಗಮ ಮತ್ತು ಮಂಡಳಿಗಳ ಅಧಿಕಾರಿಗಳೊಂದಿಗೆ ಗುರುವಾರ ಸುದೀರ್ಘ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಈ ಸೂಚನೆ ನೀಡಿದರು.

ಕಳೆದ ಐದು ವರ್ಷಗಳಲ್ಲಿ ಎಷ್ಟು ಕೈಗಾರಿಕಾ ನಿವೇಶನಗಳನ್ನು ಹೇಗೆ ಮತ್ತು ಯಾರಿಗೆ ಹಂಚಲಾಗಿದೆ. ಅವು ಯಾವ ಸ್ಥಿತಿಯಲ್ಲಿವೆ ಎನ್ನುವ ವರದಿ ಸಿದ್ಧವಾಗಬೇಕು. ಇದರ ಆಧಾರದ ಮೇಲೆ ಕ್ಷಿಪ್ರ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೇವಲ ಟಿಡಿಎಸ್‌ ಮೂಲಕವೇ ವರ್ಷಕ್ಕೆ ₹1.20 ಲಕ್ಷ ಕೋಟಿ ಸಂಗ್ರಹವಾಗುತ್ತಿದೆ. ಒಟ್ಟಿನಲ್ಲಿ ಪಾರದರ್ಶಕ ರೀತಿಯಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಒತ್ತು ನೀಡಲಾಗುವುದು ಎಂದರು.

‘ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಕಾನೂನು ವಿಭಾಗದ ಅಧಿಕಾರಿಗಳು ಸರಿಯಾಗಿ ಪ್ರತಿನಿಧಿಸದೇ ಪ್ರತಿವಾದಿಗಳ ಜತೆ ಶಾಮೀಲಾಗುತ್ತಿರುವ ವರದಿಗಳಿವೆ. ನೂತನ ಸರ್ಕಾರ ಇದನ್ನು ಎಳ್ಳಷ್ಟೂ ಸಹಿಸುವುದಿಲ್ಲ. ನಾನು ನೋಡಲು ಮೃದು ಸ್ವಭಾವದ ವ್ಯಕ್ತಿಯಾಗಿದ್ದೇನೆ. ಆದರೆ, ರಾಜ್ಯದ ಹಿತದೃಷ್ಟಿಯಿಂದ ಕಠಿಣ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ. ಕೇವಲ ಲಾಬಿ ಮಾಡಿಕೊಂಡು ಓಡಾಡುವ ಅಧಿಕಾರಿಗಳ ವಿರುದ್ಧ ಚಾಟಿ ಬೀಸುವುದು ನಿಶ್ಚಿತ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT