ಬೆಂಗಳೂರು: ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್, ಮಾಹಿತಿ ಆಯುಕ್ತರಾಗಿ ಎಸ್.ಎಂ.ಸೋಮಶೇಖರ್ ಹಾಗೂ ಕೆ.ಪಿ.ಮಂಜುನಾಥ್ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಸರ್ಕಾರ ಮಾರ್ಚ್ 23ರಂದು ಆಯುಕ್ತರ ನೇಮಕ ಮಾಡಿತ್ತು. ಕೋರ್ಟ್ಗೆ ಅಡ್ವೊಕೇಟ್ ಜನರಲ್ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿ ಈ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ವಜೀರ್ ಅಹ್ಮದ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ನೇಮಕ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಬಳಿಕ ತಡೆಯಾಜ್ಞೆ ತೆರವಾಗಿತ್ತು.

ರಾಜಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಯುಕ್ತರಿಗೆ ಪ್ರಮಾಣವಚನ ಬೋಧಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.