ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಕುಟುಂಬ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ, ಬಿಡುಗಡೆ

Published 28 ಜುಲೈ 2023, 13:32 IST
Last Updated 28 ಜುಲೈ 2023, 13:32 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್‌.ಎಸ್. ಅವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದು, ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

‘ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ತುಮಕೂರಿನ ಶಕುಂತಲಾ, ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ದೂರು ನೀಡಿದ್ದರು. ಮಹಿಳೆಯ ಗೌರವಕ್ಕೆ ಧಕ್ಕೆ ತಂದ (ಐಪಿಸಿ 509) ಆರೋಪದಡಿ ಶಕುಂತಲಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪ್ರಕರಣ ದಾಖಲಾಗುತ್ತಿದ್ದಂತೆ ಶಕುಂತಲಾ ಅವರಿಗೆ ನೋಟಿಸ್‌ ನೀಡಲಾಗಿತ್ತು. ನಂತರ, ಅವರನ್ನು ವಶಕ್ಕೆ ಪಡೆದು ಬಂಧಿಸಲಾಯಿತು. ಇದೊಂದು ಜಾಮೀನು ಸಹಿತ ಪ್ರಕರಣವಾಗಿದ್ದರಿಂದ, ಠಾಣೆ ಜಾಮೀನು ಮೇಲೆ ಶಕುಂತಲಾ ಅವರನ್ನು ಶುಕ್ರವಾರವೇ ಬಿಡುಗಡೆ ಮಾಡಲಾಗಿದೆ. ಅವರು ತಪ್ಪೊಪ್ಪಿಗೆ ಬರೆದುಕೊಟ್ಟಿದ್ದಾರೆ’ ಎಂದು ತಿಳಿಸಿವೆ.

‘ಮುಸ್ಲಿಂ ಯುವತಿಯರು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೊ ಮಾಡಿದ್ದು ಕಾಂಗ್ರೆಸ್‌ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಯ ವಿಡಿಯೊವನ್ನು ಇದೆ ತರ ಮಾಡಿದರೆ, ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳತ್ತೀರಾ?’ ಎಂದು ಶಕುಂತಲಾ ಪೋಸ್ಟ್‌ ಪ್ರಕಟಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಪರ–ವಿರೋಧ ಚರ್ಚೆ ಆರಂಭವಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಓದಿ... ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ: ಸಿದ್ದರಾಮಯ್ಯ ವಿರುದ್ಧ ಸುನಿಲ್ ಕುಮಾರ್ ಕಿಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT