ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ನಿಂದನೆ: ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

Published 25 ಫೆಬ್ರುವರಿ 2024, 6:30 IST
Last Updated 25 ಫೆಬ್ರುವರಿ 2024, 6:30 IST
ಅಕ್ಷರ ಗಾತ್ರ

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಿಂದ ನಿಂದಿಸುವ ಜತೆಗೆ ಅಪಮಾನಕರ ಮಾತುಗಳನ್ನಾಡಿದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಅಲ್ಲದೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳೆಂದು ಹೇಳಿದ್ದರು.

'ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಕುಮಟಾದಲ್ಲಿ ನಡೆದಿದ್ದ ಸಭೆಯಲ್ಲಿಯೂ ಅನಂತಕುಮಾರ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT