ನವದೆಹಲಿ: ಕರ್ನಾಟಕ ಮತ್ತು ಗೋವಾ ನಡುವಿನ ಮಹದಾಯಿ ನದಿ ಸೇರಿದಂತೆ ಅಂತರರಾಜ್ಯ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ಕೇಂದ್ರ ಕ್ರಮಕೈಗೊಳ್ಳಬೇಕು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕೃಷ್ಣಾ, ಕಾವೇರಿ ಜಲವಿವಾದ ಸೇರಿದಂತೆ ರಾಜ್ಯಗಳ ನಡುವೆ ಹಲವು ಜಲ ವಿವಾದಗಳಿವೆ. ಅಂತಹ ವಿವಾದಗಳನ್ನು ಸೌಹಾರ್ದಯುತವಾಗಿ ಪರಿಹರಿಸಿದರೆ ಅದು ಎಲ್ಲ ರಾಜ್ಯಗಳಿಗೆ ಮತ್ತು ರೈತರಿಗೆ ಅನುಕೂಲವಾಗುತ್ತದೆ’ ಎಂದರು.

‘ಈ ವಿವಾದಗಳನ್ನು ಪರಿಹರಿಸಲು ಎಲ್ಲ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಕೈಜೋಡಿಸಬೇಕು. ಆರ್ಥಿಕ ಅಭಿವೃದ್ಧಿಯಾದರೆ ಮತ್ತು ದೇಶದ ಎಲ್ಲೆಡೆ ಹೆಚ್ಚಿನ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡರೆ, ರೈತರು ಅಭಿವೃದ್ಧಿ ಹೊಂದುತ್ತಾರೆ ಮತ್ತು ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ’ ಎಂದು ಅವರು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.