ಬೆಂಗಳೂರು: ಒಳಮೀಸಲಾತಿಯ ಸಮರ್ಪಕ ಅನುಷ್ಠಾನಕ್ಕೆ ಕಾಯ್ದೆ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಿಸಿದ ಕರಡು ಮಸೂದೆಗೆ ಸಮ್ಮತಿ ಪಡೆಯಲಿದೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ.

ಸುದ್ದಿಗಾರರ ಜತೆ ಸಭೆಯ ನಂತರ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ‘ಅ.31ಕ್ಕೆ ಅಲೆಮಾರಿ ಸಮುದಾಯಗಳ ಸಭೆ ನಡೆಸಲಾಗುವುದು. ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ರೂಪಿಸಲಾಗಿದ್ದು, ಕೋರ್ಟ್ ನಿರ್ದೇಶನದಂತೆಯೇ ಕಾಯ್ದೆ ರೂಪಿಸುವುದರಿಂದ ಅನುಷ್ಠಾನಕ್ಕೆ ಇರುವ ಎಲ್ಲ ತೊಡಕುಗಳೂ ನಿವಾರಣೆಯಾಗಲಿವೆ. ಸಂಬಂಧಿಸಿದ ಇಲಾಖೆಗಳ ಜತೆಗೆ ಈಗಾಗಲೇ ಚರ್ಚೆ ಮಾಡಲಾಗಿದೆ’ ಎಂದರು.

‘ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧ ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನೂ ವಾಪಸ್ ಪಡೆಯುತ್ತೇವೆ’ ಎಂದು ಹೇಳಿದರು.

ಸಚಿವರಾದ ಜಿ.ಪರಮೇಶ್ವರ, ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಪ್ರಿಯಾಂಕ್ ಖರ್ಗೆ, ಆರ್.ಬಿ.ತಿಮ್ಮಾಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ರೋಸ್ಟರ್ ಜಾರಿ ಕುರಿತು ಎಲ್ಲರ ಅಹವಾಲುಗಳನ್ನೂ ಆಲಿಸಬೇಕು. ಯಾವುದೇ ಜಾತಿಗೂ ಅನ್ಯಾಯವಾಗದಂತೆ ಮೀಸಲಾತಿ ಸಿಗುವುದನ್ನು ಖಾತ್ರಿಪಡಿಸಬೇಕು.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಒಳ ಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ, ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸಲು, ಎಲ್ಲರಿಗೂ ಅವಕಾಶ, ನ್ಯಾಯ ಸಿಗುವಂತೆ ಮಾಡಲು ಕಾನೂನಿನ ಅಗತ್ಯವಿದೆ.
-ಎಚ್.ಕೆ.ಪಾಟೀಲ, ಕಾನೂನು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.