ಬೆಂಗಳೂರು: ‘ರಾಜ್ಯ ಸರ್ಕಾರದ ಕ್ವಿನ್ ಸಿಟಿ ಯೋಜನೆಯಲ್ಲಿ ಭಾಗಿಯಾಗಲು ಬ್ರಿಟನ್ನ ಲಿವರ್ಫೂಲ್, ಈಸ್ಟ್ ಲಂಡನ್, ಯಾರ್ಕ್, ವಾಲ್ವರ್ ಹ್ಯಾಂಪ್ಟನ್ ವಿಶ್ವವಿದ್ಯಾಲಯಗಳು ಆಸಕ್ತಿ ವ್ಯಕ್ತಪಡಿಸಿವೆ’ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಹೇಳಿದ್ದಾರೆ.

2025ರಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ದತೆಗಳ ಅಂಗವಾಗಿ ಬ್ರಿಟನ್ನ ಉದ್ಯಮಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಲಂಡನ್ನಲ್ಲಿ ನಡೆಸಿದ ಸಭೆಯ ನಂತರ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.

‘ಕ್ವಿನ್ ಸಿಟಿಯೂ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಕ್ಯಾಂಪಸ್ ಆರಂಭಿಸಲು ಬ್ರಿಟನ್ನ ವಿಶ್ವವಿದ್ಯಾಲಯಗಳಿಗೆ ಇರುವ ಅವಕಾಶಗಳನ್ನು ಪ್ರತಿನಿಧಿಗಳಿಗೆ ವಿವರಿಸಲಾಯಿತು. ಕರ್ನಾಟಕವು ಜಾಗತಿಕ ಶಿಕ್ಷಣ ಕೇಂದ್ರವಾಗಿ ರೂಪುಗೊಳ್ಳುತ್ತಿರುವುದನ್ನು ಮನವರಿಕೆ ಮಾಡಿಕೊಡಲಾಯಿತು’ ಎಂದಿದ್ದಾರೆ.

ಸಚಿವರ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗವು ಬ್ರಿಟನ್ನ ಪ್ರಮುಖ ಕೈಗಾರಿಕೋದ್ಯಮಿಗಳ ಜೊತೆ ಪ್ರತ್ಯೇಕವಾಗಿ ದುಂಡು ಮೇಜಿನ ಸಭೆಗಳನ್ನು ನಡೆಸಿತು. ಬ್ರಿಟನ್ನ ಸಣ್ಣ ಉದ್ದಿಮೆ ಹಾಗೂ ರಫ್ತು ಸಚಿವ ಗರೆಥ್ ಥಾಮಸ್, ಬ್ರಿಟನ್–ಭಾರತ ವಹಿವಾಟು ಮಂಡಳಿಯ (ಯುಕೆಐಬಿಸಿ) ಪ್ರತಿನಿಧಿಗಳಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಸಭೆಯಲ್ಲಿ ವಿವರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.