ಬೆಂಗಳೂರು: ಅರಮನೆ ಮೈದಾನದಲ್ಲಿ ಫೆ. 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವ ಗಣ್ಯರಿಗೆ ಕರ್ನಾಟಕದ ಅಸ್ಮಿತೆ ಸಾರುವ ವಿಶಿಷ್ಟ ಉಡುಗೊರೆ ನೀಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸೂಚಿಸಿದರು.

ಸಮಾವೇಶದ ಸಿದ್ಧತೆಗಳ ಕುರಿತು ಉನ್ನತಮಟ್ಟದ ಅಧಿಕಾರಿಗಳ ಜತೆ ಶನಿವಾರ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಜಾಗತಿಕ ಹೂಡಿಕೆದಾರರ ಸಮಾವೇಶ ಫೆ. 11ರಂದು ಉದ್ಘಾಟನೆಯಾಗಲಿದೆ. ಅತಿಥಿಗಳಿಗೆ ರೇಷ್ಮೆ ಸ್ಕಾರ್ಫ್, ಮೈಸೂರು ಸ್ಯಾಂಡಲ್ ಸೋಪ್ ಮತ್ತಿತರ ವಿಶಿಷ್ಟ ಉಡುಗೊರೆ ನೀಡಬೇಕು. ಫೆ. 12, 13 ಮತ್ತು 14ರಂದು ಮೂರು ದಿನ ಪೂರ್ಣ ಪ್ರಮಾಣದಲ್ಲಿ ಹಲವು ವಿಚಾರಗಳ ಕುರಿತು ಗೋಷ್ಠಿಗಳು ಮತ್ತು ಹೂಡಿಕೆ ಒಪ್ಪಂದಗಳು ನಡೆಯಲಿವೆ. ಪ್ರತಿಯೊಂದು ವಿಭಾಗಕ್ಕೂ ಸೂಕ್ತ ಆದ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.