ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಮಾರ್ಚ್ 23ರಿಂದ ಆರಂಭವಾಗಲಿದ್ದು, ಮೊದಲ ಹಂತದ 17 ಪಂದ್ಯಗಳ ವೇಳಾಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್ ಐದರವರೆಗೆ ನಡೆಯುವ ಪಂದ್ಯಗಳ ವೇಳಾಪಟ್ಟಿ ಇದಾಗಿದೆ.
ಸಂಸತ್ ಚುನಾವಣೆ ವೇಳಾಪಟ್ಟಿ ಘೋಷಣೆಯ ನಂತರ ಇನ್ನುಳಿದ ಪಂದ್ಯಗಳ ಮಾಹಿತಿಯನ್ನು ಬಿಡುಗಡೆ ಮಾಡಲು ಐಪಿಎಲ್ ಆಡಳಿತ ಮಂಡಳಿಯು ನಿರ್ಧರಿಸಿದೆ.
ಮೊದಲ ಹಂತದಲ್ಲಿ ಎರಡು ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಾರ್ಚ್ 28 ರಂದು ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು; ಏಪ್ರಿಲ್ 5ರಂದು ಕೋಲ್ಕತ್ತ ನೈಟ್ರೈಡರ್ಸ್ ತಂಡವನ್ನು ಎದುರಿಸಲಿದೆ.